ಮಂದಸ್ಮಿತ ಬಾಲರಾಮನ ಮೂರ್ತಿ ಕಣ್ತುಂಬಿಕೊಳ್ಳಿ

ನಮ್ಮ ಕರುನಾಡ ಕುವರ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಇದೇ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿದ್ದು, ವಿಗ್ರಹದ ಮೊದಲ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ನೀವಿನ್ನೂ ನೋಡಿಲ್ವ? ಹಾಗಿದ್ರೆ ಈ ಫೋಟೋ ನೋಡಿ ನೀವು ಕಣ್ತುಂಬಿಸಿಕೊಳ್ಳಿ!

Mandasmita Balarama idol

ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಅವರು ಸಮಗ್ರ ಪ್ರಕ್ರಿಯೆಯ ನಂತರ ವಿಗ್ರಹವನ್ನು ಆಯ್ಕೆ ಮಾಡಿದ್ದಾರೆ. ಗರ್ಭಗುಡಿಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ ಚಿತ್ರ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಬಾಲರಾಮನ ರೂಪದಲ್ಲಿ ಕಂಗೋಳಿಸಿದ ರಾಮಲಲ್ಲಾ:

ಕೃಷ್ಣಶಿಲೆಯಲ್ಲಿ ಮೂಡಿದ 5 ವರ್ಷದ 51 ಇಂಚು ಎತ್ತರದ ಬಾಲರಾಮನ ಮೂರ್ತಿಯು ಸುಮಾರು 150-200 ಕೆಜಿ ತೂಕವಿದೆ. ಮಂತ್ರಘೋಷಗಳೊಂದಿಗೆ ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಇರಿಸಲಾಗಿದೆ.

ಜನವರಿ 22ರಂದು ರಾಮಭಕ್ತರು ಇದರ ರೂಪ ಕಣ್ತುಂಬಿಕೊಳ್ಳುವ ಸಮಯ ಮತ್ತಷ್ಟು ಸನ್ನಿಹಿತವಾದಂತಾಗಿದೆ. ಅಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಲಿದೆ.

ಇಂದು ಬೆಳಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಮಲಲ್ಲಾ ವಿಗ್ರಹದ ಮೊದಲ ಫೋಟೋವನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

You might also like
Leave A Reply

Your email address will not be published.