ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಕವಿಗೆ ಆಹ್ವಾನ – ಕನ್ನಡಿಗರಿಂದ ಮೋದಿಗೆ ಪ್ರಶಂಸೆ

ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ್ದ ಕವಿ ಮಂಜುನಾಥ್‌ಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡುವ ಮೂಲಕ, ಕೇಂದ್ರ ಸರ್ಕಾರದಿಂದ ಕರ್ನಾಟಕದ ಮೇಲೆ ಮೇಲಿಂದ ಮೇಲೆ ಪ್ರಶಂಸೆಯ ಸುರಿಮಳೆ ಹರಿದುಬರತ್ತಿದೆ.

poet Manjunath

ಹೌದು, ವೃತ್ತಿಯಲ್ಲಿ ಎಲ್ಐಸಿ ವಿಮಾ ಪಾಲಿಸಿದಾರ ಹಾಗೂ ಪ್ರವೃತ್ತಿಯಲ್ಲಿ ಕವಿಯಾಗಿರುವ ಕೊಳ್ಳೇಗಾಲದ ಮಂಜುನಾಥ್ ಅವರಿಗೆ ಕೇಂದ್ರ ಸರ್ಕಾರದ ದೆಹಲಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಬಂದಿರುವುದು ಸ್ವಾಗತಾರ್ಹ.

ಕೇಂದ್ರ ಸರ್ಕಾರದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಆನ್’ಲೈನ್ ರಂಗೋಲಿ, ದೇಶಭಕ್ತಿ ಗೀತೆ, ಲಾಲಿಹಾಡು ಸ್ಪರ್ಧೆ ಆಯೋಜಿಸಲಾಗಿತ್ತು. ಪುತ್ರನ ಒತ್ತಾಸೆಗೆ ಮಣಿದು ‘ಮಲಗು ಕಂದ ಮಲಗು ಕೂಸೆ, ಮಲಗು ನನ್ನ ಜಾಣ ಮರಿಯೇ’ ಎಂಬ ಸಾಲಿನಿಂದ ಜೋಗುಳ ಪದ ರಚಿಸಿದ್ದರು.

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ನಡೆಸಿದ್ದ ಪೆನ್ ಎ ಲೋರಿ ಎಂಬ ಜೋಗುಳ ಗೀತೆ ಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲೆಯ ಕವಿ ಮಂಜುನಾಥ್ ಈ ಹಾಡಿಗೆ ಪ್ರಥಮ ಸ್ಥಾನ ಪಡೆದಿದ್ದರು.

“ಮಲಗು ಕಂದ, ಮಲಗು ಕೂಸೆ” ಎಂಬ ಈ ಲಾಲಿಹಾಡಿಗೆ ಅವರ ತಾಯಿ, ಅಜ್ಜಿ ಹಾಡುತ್ತಿದ್ದ ಜೋಗುಳಗಳೇ ಸ್ಫೂರ್ತಿಯಾಗಿವೆ. ಇದನ್ನು ಕೇಳಿದರೆ ನಿಮಗೂ ಆನಂದವಾಗುತ್ತದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ ಪ್ರಶಂಸಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗೆ ಪಾತ್ರವಾಗಿದ್ದ ಹಾಡಿಗೆ 6 ಲಕ್ಷ ರೂ. ನಗದು ಬಹುಮಾನದ ಮನ್ನಣೆ ಸಿಕ್ಕಿತ್ತು. ಈಗ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಕವಿ ಮಂಜುನಾಥ್ ಅವರಿಗಾಗಿ ಟಿಕೆಟ್ ಬುಕ್ ಮಾಡಲಾಗಿದೆ. ಮಂಜುನಾಥ್ ದಂಪತಿ ಗಣರಾಜ್ಯೋತ್ಸವದಂದು ದೆಹಲಿಗೆ ತೆರಳಲಿದ್ದಾರೆ.

You might also like
Leave A Reply

Your email address will not be published.