ಲೋಕಸಭಾ ಚುನಾವಣೆ – ಕಾಂಡೋಮ್ ಪ್ರಚಾರ

ಇನ್ನೇನು ಲೋಕಸಭಾ ಚುನಾವಣೆಗೆ ಒಂದಷ್ಟು ಸಮಯ ಮಾತ್ರ ಉಳಿದಿದ್ದು, ದೇಶಾದ್ಯಂತ ಎಲ್ಲಾ ಪಕ್ಷಗಳು ಒಂದಲ್ಲ ಒಂದು ರೀತಿಯಲ್ಲಿ ಕಸರತ್ತು ನಡೆಸುತ್ತಿವೆ. ಈ ಸಂದರ್ಭದಲ್ಲಿ ಚುನಾವಣಾ ಪ್ರಚಾರದ ಸಾಧನವಾಗಿ ಕಾಂಡೋಮ್ ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅಯ್ಯೋ ಅದ್ಯಾವ ಪಕ್ಷ, ಯಾವ ರಾಜ್ಯ ಅಂತೀರ? ಈ ಸುದ್ದಿ ಓದಿ.

ಹೌದು. ಈ ಘಟನೆ ಆಂಧ್ರ ಪ್ರದೇಶದಲ್ಲಿ ನಡೆಯುತ್ತಿದೆ. ಎರಡು ಪಕ್ಷಗಳ ಹೆಸರಿನಲ್ಲಿ ಕಾಂಡೋಮ್ ಪ್ಯಾಕ್ಗಳು ಮಾರಾಟವಾಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. YSR ಕಾಂಗ್ರೆಸ್ ಪಕ್ಷ ಮತ್ತು ತೆಲುಗು ದೇಶಂ ಪಾರ್ಟಿ (TDP) ಪಕ್ಷದ ಕಾರ್ಯಕರ್ತರು ಮತದಾರರಿಗೆ ಹಂಚುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಷ್ಟಕ್ಕೂ ಆ ವೀಡಿಯೋದಲ್ಲಿ ಏನಿದೆ..? :

ಕಾಂಡೋಮ್ ಗಳನ್ನು ಟಿಡಿಪಿ ಕಾರ್ಯಕರ್ತ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಹಂಚುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಕಾಂಡೋಮ್ಗಳನ್ನು ಏಕೆ ವಿತರಿಸುತ್ತಿದ್ದಿರಿ ಎಂದು ಪ್ರಶ್ನಿಸಿದಾಗ, ಹೆಚ್ಚು ಮಕ್ಕಳಿದ್ದರೆ, ಹೆಚ್ಚಿನ ಹಣವನ್ನು ವಿತರಿಸಬೇಕು. ಅದಕ್ಕಾಗಿಯೇ ಈ ಕಾಂಡೋಮ್ಗಳನ್ನು ವಿತರಿಸಲಾಗುತ್ತಿದೆ ಎಂದು ಉತ್ತರಿಸಿರುವುದನ್ನು ವೀಡಿಯೋದಲ್ಲಿ ಗಮನಿಸಬಹುದಾಗಿದೆ.

ಒಟ್ಟಿನಲ್ಲಿ ಕಾಂಡೋಮ್ ಪ್ಯಾಕೆಟ್ಗಳು ಲೋಕಸಭಾ ಚುನಾವಣೆಗಾಗಿ ಮನೆ ಮನೆಗೆ ಪ್ರಚಾರ ನಡೆಸುತ್ತಿರುವ ಪಕ್ಷದ ಮುಖಂಡರು ಸಾರ್ವಜನಿಕರಿಗೆ ವಿತರಿಸಿದ ಕಿಟ್ನ ಭಾಗವಾಗಿವೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕಾಂಡೋಮ್ಗಳನ್ನು ವಿತರಿಸಿದ್ದಕ್ಕಾಗಿ ಎರಡೂ ಪಕ್ಷಗಳು ಪರಸ್ಪರ ಕೆಸರೆರಚಿಕೊಂಡಿರುವುದಾಗಿ ವರದಿಯಾಗಿದೆ.

ವೈ.ಎಸ್.ಆರ್.ಸಿ.ಪಿ ತನ್ನ ಎಕ್ಸ್ ಖಾತೆಯಲ್ಲಿ ಟಿಡಿಪಿ ಪಕ್ಷವು ಎಷ್ಟು ಕೆಳಮಟ್ಟಕ್ಕೆ ಇಳಿಯುತ್ತದೆ ಎಂದು ಇದರಿಂದ ಗೊತ್ತಾಗುತ್ತದೆ ಎಂಬುದಾಗಿ ವಾಗ್ದಾಳಿ ನಡೆಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, YSRCP ಲೋಗೋದೊಂದಿಗೆ ಟಿಡಿಪಿ ಇದೇ ರೀತಿಯ ಕಾಂಡೋಮ್ ಪ್ಯಾಕ್ ಅನ್ನು ಪೋಸ್ಟ್ ಮಾಡಿದೆ.

You might also like
Leave A Reply

Your email address will not be published.