LPG Cylinder Price : ಹೊಸ ವರ್ಷದ ಮೊದಲ ಸಿಹಿಸುದ್ದಿ – ಸಿಲಿಂಡರ್‌ ಬೆಲೆಯಲ್ಲಿ ಭಾರೀ ಇಳಿಕೆ

2024ರ ನೂತನ ಹೊಸ ವರ್ಷ ಹಾಗೂ ಕ್ರಿಸ್ಮಸ್‌ ಹಬ್ಬಕ್ಕೆ ಮೋದಿ ಸರ್ಕಾರ ದೇಶದ ಜನತೆಗೆ ಸಿಹಿಸುದ್ದಿ ನೀಡಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದೆ.

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 39.50 ರೂ. ಇಳಿಕೆ ಮಾಡಿ ತೈಲ ಕಂಪನಿಗಳು ಆದೇಶ ಹೊರಡಿಸಿದ್ದು, ಪರಿಷ್ಕೃತ ದರ ಇಂದು ಡಿಸೆಂಬರ್‌ 22 ರಿಂದಲೇ ಜಾರಿಗೆ ಬರಲಿದೆ. ಇನ್ನು, ಗೃಹ ಬಳಕೆಯ LPG ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

19 ಕೆಜಿಯ ವಾಣಿಜ್ಯ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 1,830 ರೂ.ಗಳಿದೆ. ದಿನ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 905.50 ರೂ. ಇದ್ದು, ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 300 ರೂ. ಸಬ್ಸಿಡಿ ಹಣವನ್ನು ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಆಗಸ್ಟ್‌ನಲ್ಲಿ ತೈಲ ಕಂಪನಿಗಳು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 200 ರೂ. ನಷ್ಟು ಕಡಿಮೆ ಮಾಡಿ, ಗ್ರಾಹಕರಲ್ಲಿ ಸಂತಸವನ್ನುಂಟು ಮಾಡಿದ್ದವು. ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ ಬೆಲೆ 1757.50 ರೂ., ಕೋಲ್ಕತ್ತಾದಲ್ಲಿ 1868.50 ರೂ., ಮುಂಬೈನಲ್ಲಿ 1710 ರೂ. ಹಾಗೂ ಚೆನ್ನೈನಲ್ಲಿ 1929 ರೂ. ಆಗಿದೆ.

You might also like
Leave A Reply

Your email address will not be published.