ಮ್ಯಾಕ್ಸ್ ಮುಗಿಯುವ ಮುನ್ನವೇ ಇನ್ನೆರಡು ಚಿತ್ರಗಳಿಗೆ ಸಹಿ ಹಾಕಿದ ಕಿಚ್ಚ? – ಅಭಿಮಾನಿಗಳಿಗೆ ಕುತೂಹಲ

ಕಿಚ್ಚ ಸುದೀಪ್ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರೋ ವಿಚಾರವೇ. ಇದರ ಜೊತೆ ಇನ್ನೂ ಎರಡು ಚಿತ್ರಗಳಿಗೆ ಸಹಿ ಕೂಡ ಮಾಡಿದ್ದು, ಸದ್ಯ ಮ್ಯಾಕ್ಸ್ ಸಿನಿಮಾದಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಹನುಮಾನ್ ಚಿತ್ರ ಖ್ಯಾತಿಯ ನಿರಂಜನ್ ರೆಡ್ಡಿ ಅವರ ಚಿತ್ರದಲ್ಲೂ ಸುದೀಪ್ ನಟಿಸಲಿದ್ದಾರೆ ಎಂಬ ವದಂತಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಇದು ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ಕಾದು ನೋಡಬೇಕಿದೆ.

ನಿರ್ಮಾಪಕ ನಿರಂಜನ್ ರೆಡ್ಡಿ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾವನ್ನು ನಿರ್ಮಾಣ ಮಾಡುವ ಯೋಜನೆ ಹಾಕಿಕೊಂಡಿದ್ದು, ಈ ಚಿತ್ರಕ್ಕೆ ಸುದೀಪ್ ನಾಯಕ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಆದರೆ, ಕಾಂಬಿನೇಷನ್ ಕಾರಣದಿಂದಾಗಿ ಕುತೂಹಲವನ್ನಂತೂ ಮೂಡಿಸಿದೆ.

Kiccha signed two more films before the completion of Max?  - Curiosity for fans

ಸದ್ಯ ಮ್ಯಾಕ್ಸ್ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆದಿದ್ದು,ಈ ಭಾಗದ ಚಿತ್ರೀಕರಣದಲ್ಲಿ ಸುದೀಪ್ ಭಾಗಿಯಾಗಿದ್ದಾರೆ. ಅಂದುಕೊಂಡ ತಿಂಗಳಲ್ಲೇ ಸಿನಿಮಾ ತೆರೆಗೆ ತರಬೇಕಾಗಿದ್ದರಿಂದ ಚಿತ್ರೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಈ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿದ ಮೇಲೆ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಈ ಕುರಿತಂತೆ ಚಿತ್ರದ ಕೆಲಸ ಎಲ್ಲಿಯವರೆಗೂ ಬಂತು ಎಂದು ಸ್ವತಃ ಸುದೀಪ್ ಅವರೇ ಮಾಹಿತಿ ನೀಡಿದ್ದರು.

ಬಹುನಿರೀಕ್ಷಿತ ಮ್ಯಾಕ್ಸ್ ಬಗ್ಗೆ ಸುದೀಪ್ ಮಾಹಿತಿ ನೀಡುವ ಮೂಲಕ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಸಂಕ್ರಾಂತಿ’ ನಂತರ ಮ್ಯಾಕ್ಸ್ ಸಿನಿಮಾದ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭ ಮಾಡುತ್ತಿದ್ದೇವೆ. ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ. ಚಿತ್ರದ ಉಳಿದ ಭಾಗಗಳ ಚಿತ್ರೀಕರಣ ಪ್ರಗತಿಯಲ್ಲಿದೆ ಎಂದು ಇತ್ತೀಚೆಗೆ ಮಾಹಿತಿ ಹಂಚಿಕೊಂಡಿದ್ದು, ಅಭಿಮಾನಿಗಳು ಸಿನಿಮಾದ ನಿರೀಕ್ಷೆಯಲ್ಲಿದ್ದಾರೆ.

You might also like
Leave A Reply

Your email address will not be published.