ʼನಾ ಇಷ್ಟ ಪಟ್ಟ ಹುಡುಗಿ ಮದುವೆಗೆ ಒಪ್ಪಲಿಲ್ಲʼ – ಕಾಲೇಜು ಲವ್‌ ಸ್ಟೋರಿ ಬಿಚ್ಚಿಟ್ಟ ಸಿದ್ದರಾಮಯ್ಯ

ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಮದುವೆ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಳೆಯ ದಿನಗಳನ್ನು ಸ್ಮರಿಸಿದರು.

ಕುವೆಂಪು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿ, ನಾ ಇಷ್ಟ ಪಟ್ಟ ಹುಡುಗಿ ಮದುವೆಗೆ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ‌. ಹಾಗಾಗಿ ಮದುವೆಯಾಗಲಿಲ್ಲ ಎಂದು ತಿಳಿಸಿದರು.

ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು - ಸಿದ್ದರಾಮಯ್ಯ

ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಪ್ರತಿಪಾದಿಸಿದ ಅವರು, ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮ ಸಮಾಜದ ಆಶಯ ಈಡೇರಲು ಸಾಧ್ಯ ಎಂದು ತಿಳಿಸಿದರು.

ಡಾ.ಬಿ.ಆರ್‌.ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಅಲ್ಲದೆ ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಈಗಾಗಲೇ ಜಾರಿ ಮಾಡಿದೆ ಎಂದರು.

You might also like
Leave A Reply

Your email address will not be published.