ಭಾರತೀಯ ವಿದ್ಯಾರ್ಥಿಗಳನ್ನು ಪ್ರಾನ್ಸ್ ಗೆ ಸ್ವಾಗತಿಸಿದ ಮ್ಯಾಕ್ರನ್

75ನೇ ಗಣರಾಜ್ಯೋತ್ಸವ ಆಚರಣೆಯ ಮುಖ್ಯ ಅತಿಥಿಯಾಗಿ ಮ್ಯಾಕ್ರನ್ ಭಾರತಕ್ಕೆ ಆಗಮಿಸುವುದ್ದಕ್ಕೂ ಮುನ್ನ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ (Emmanuel Macron) ತಮ್ಮ ಎಕ್ಸ್ ಖಾತೆಯಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಆಹ್ವಾನ ನೀಡಿದ್ದಾರೆ. ಅದು ಅಧ್ಯಯನಕ್ಕೊ ಅಥವಾ ಉದ್ಯೋಗಕ್ಕೋ? ಏನೆಂದು ಘೋಷಣೆ ಮಾಡಿದ್ದಾರೆ ಎಂಬಿತ್ಯಾದಿ ಸವಿವರ ಮಾಹಿತಿಗಳಿಗಾಗಿ ಈ ಸ್ಟೋರಿ ಓದಿ.

ಗಣರಾಜ್ಯೋತ್ಸವ ಆಚರಣೆಗೂ ಮುನ್ನ ಶುಕ್ರವಾರ ಬೆಳಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಮ್ಯಾಕ್ರನ್‌ 2030ರ ವೇಳೆಗೆ 30 ಸಾವಿರ ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್ ಸ್ವಾಗತಿಸಲಿದೆ ಎಂದು ಬರೆದುಕೊಂಡಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಏನಿದೆ..?

2030ರ ವೇಳೆಗೆ ಸುಮಾರು 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್‌ನಲ್ಲಿ ಅಧ್ಯಯನ ಮಾಡಲು ಆಹ್ವಾನಿಸುವುದಾಗಿ ನಿರ್ಧರಿಸಿದ್ದೆನೆ. ಇದು ನನ್ನ ಮಹತ್ವಾಕಾಂಕ್ಷೆಯ ಗುರಿಯಾಗಿದ್ದು, ಅದನ್ನು ಮಾಡಿಯೇ ತೀರುತ್ತೇನೆ ಎಂದು ತೀರ್ಮಾನಿಸಿರುವುದಾಗಿ ಮ್ಯಾಕ್ರನ್‌ ತಿಳಿಸಿದ್ದಾರೆ.

ಗುರುವಾರ ಭಾರತಕ್ಕೆ ಆಗಮಿಸಿರುವ ಮ್ಯಾಕ್ರನ್‌ ಅವರು ಜೈಪುರಕ್ಕೆ ಆಗಮಿಸಿದ್ದು ಈ ವೇಳೆ ಅವರನ್ನು ನರೇಂದ್ರ ಮೋದಿ ಅವರು ಸ್ವಾಗತಿಸಿದ್ದರು.

ಬಳಿಕ ಪ್ರಧಾನಿ ಜೊತೆಗೆ ಜೈಪುರದಲ್ಲಿ ಭರ್ಜರಿ ರೋಡ್ ಶೋ ನಲ್ಲಿ ಭಾಗಿಯಾಗಿದ್ದರು. ಗಣರಾಜ್ಯೋತ್ಸವದ ಬಳಿಕ ಅವರು ಫ್ರಾನ್ಸ್‌ ರಾಯಭಾರ ಕಚೇರಿಗೆ ಭೇಟಿ ನೀಡಲಿರುವ ಅವರು, ಅಲ್ಲಿನ ಸಿಬ್ಬಂದಿ ಜೊತೆ ಮಾತುಕತೆ ನಡೆಸಲಿದ್ದಾರೆ. ಸಂಜೆ 7.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಬಳಿಕ ರಾಷ್ಟ್ರಪತಿ ಭವನದಲ್ಲಿ ರಾತ್ರಿ ನಡೆಯುವ ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.

You might also like
Leave A Reply

Your email address will not be published.