ಗಣರಾಜ್ಯೋತ್ಸವ ಪೆರೇಡ್ – ಮೋದಿ ಪೇಟ ನೋಡಿ ಫಿದಾ ಆದ ಜನರು

ಗಣರಾಜ್ಯೋತ್ಸವ ಅಥವಾ ಸ್ವಾತಂತ್ರ್ಯೋತ್ಸವ ಬಂದ್ರೆ ಸಾಕು ದೇಶದ ನಾನಾ ಜನರ ಚಿತ್ತ ಮೋದಿ ಪೇಟದತ್ತ ಹೋಗುವುದು ಕಾಮನ್. ಅದ್ರಲ್ಲೂ ಈ ಭಾರಿ 75ನೇ ಗಣರಾಜ್ಯೋತ್ಸವಕ್ಕೆ ಮೋದಿ ಅವರು ಯಾವ ರೀತಿಯ ಪೇಟ ಧರಿಸಿರಬಹುದು ಎಂಬ ನಿರೀಕ್ಷೆ ಹಲವರಲ್ಲಿ ಇತ್ತು. ಹೇಗಿತ್ತು ಪರೇಡ್ ಅಲ್ಲಿ ಮೋದಿ ಅವರ ಖದರ್ ಲುಕ್? ಇಲ್ಲಿದೆ ಬನ್ನಿ ಇಂಟರೆಸ್ಟಿಂಗ್ ಸ್ಟೋರಿ.

ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿಯವರ ಪೇಟ ಗಮನಸೆಳೆದಿದೆ. ವರ್ಣರಂಜಿತ ಪೇಟ ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರಿಸುವ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

Narendra Modi

ಬಹುವರ್ಣದ ಪೇಟದ ಆಯ್ಕೆಯೇ ಯಾಕೆ?

ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು. ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು.

ಪ್ರಧಾನಿಯವರು ಈ ಬಾರಿ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹುವರ್ಣದ ಪೇಟವನ್ನು (Modi Turban) ಆಯ್ಕೆ ಮಾಡಿದರು. ಗುಲಾಬಿ ಮತ್ತು ಕಿತ್ತಳೆ ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಧರಿಸುವ ಮೂಲಕ ಗಮನಸೆಳೆದರು.

ಮೋದಿ ಅವರ ಖದರ್ ಲುಕ್ ಹೇಗಿತ್ತು?

ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವದ ಎರಡು ಸಂದರ್ಭಗಳಲ್ಲಿ ಪ್ರಧಾನಿಯವರ ಉಡುಗೆಯ ಆಯ್ಕೆಯು ಹೆಚ್ಚಿನ ಗಮನವನ್ನು ಸೆಳೆಯುತ್ತದೆ. ಈ ವರ್ಷ ಮೋದಿ ಅವರು ಬಿಳಿ ಕುರ್ತಾವನ್ನು ಧರಿಸಿದ್ದಾರೆ. ಜೊತೆಗೆ ಕಪ್ಪು ಕಂದು ಬಣ್ಣದ ಜಾಕೆಟ್ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದಾರೆ.

ಇಂತಹ ಕಾರ್ಯಕ್ರಮಗಳಲ್ಲಿ ಪ್ರಧಾನಿಯವರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುತ್ತಾರೆ. ವಾಸ್ತವವಾಗಿ ಪ್ರಧಾನಿಯವರು ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿದಾಗ ಅಲ್ಲಿನ ಸಂಸ್ಕೃತಿಯ ಬಗ್ಗೆ ಗೌರವವನ್ನು ತೋರಿಸುವ ಪ್ರಯತ್ನ ಮಾಡುವುದೇ ಅವರ ಮತ್ತೊಂದು ವೈಶಿಷ್ಟ್ಯ.

You might also like
Leave A Reply

Your email address will not be published.