ಪಂದ್ಯಶ್ರೇಷ್ಠ ಪ್ರಶಸ್ತಿ : ಎಂಎಸ್‌ ಧೋನಿ ದಾಖಲೆ ಸರಿಗಟ್ಟಿದ ವಿರಾಟ್‌ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ಬರೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದವರ ಪಟ್ಟಿಯಲ್ಲಿ ಎಂಎಸ್ ಧೋನಿಯನ್ನು ವಿರಾಟ್ ಕೊಹ್ಲಿ ಸರಿದೂಗಿಸಿದ್ದಾರೆ.

ಸೋಮವಾರ ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ 2024ರ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 77 ರನ್ಗಳನ್ನು ಕಲೆ ಹಾಕಿದ್ದರು. ಆ ಮೂಲಕ ಆರ್’ಸಿಬಿ ತಂಡದ 4 ವಿಕೆಟ್’ಗಳ ಗೆಲುವಿನಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದರು. ಇದರೊಂದಿಗೆ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವುದು ಶ್ಲಾಘನೀಯ.

ಎಂಎಸ್ ಧೋನಿ ದಾಖಲೆಯನ್ನು ಸರಿಗಟ್ಟಿದ ವಿರಾಟ್ ಕೊಹ್ಲಿ:

ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ 17ನೇ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ಇಷ್ಟೇ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿಯ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಭಾರತೀಯ ಆಟಗಾರರ ಪೈಕಿ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ (19) ಗೆದ್ದಿದ್ದಾರೆ.

ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದವರ ಪಟ್ಟಿ

1. ಎಬಿ ಡಿ ವಿಲಿಯರ್ಸ್-25
2. ಕ್ರಿಸ್‌ ಗೇಲ್-22
3. ರೋಹಿತ್‌ ಶರ್ಮಾ-19
4. ಡೇವಿಡ್‌ ವಾರ್ನರ್-18
5. ವಿರಾಟ್‌ ಕೊಹ್ಲಿ-17
6. ಎಂಎಸ್‌ ಧೋನಿ-17
7. ಯೂಸೂಪ್ ಪಠಾಣ್-16

You might also like
Leave A Reply

Your email address will not be published.