ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಉದ್ಘಾಟನೆಗೆ ಫುಲ್ ಬಂದೋಬಸ್ತ್: ಒಂದು ಆಮಂತ್ರಣಕ್ಕೆ ಒಬ್ಬರಿಗಷ್ಟೇ ಪ್ರವೇಶ, ಆಧಾರ್ ಕಡ್ಡಾಯ!

ಅಯ್ಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಈಗಾಗಲೇ ಆಹ್ವಾನ ಪತ್ರಿಕೆ ಹಂಚಿಕೆ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ದೇಶ-ವಿದೇಶ ಸೇರಿದಂತೆ ಎಲ್ಲೆಡೆಯು ಮುಂದುವರಿದಿದೆ. ಕಾರ್ಯಕ್ರಮದ ಉದ್ಘಾಟನೆಗೆ ಹೇಗೆ ತಯಾರಿ ನಡೆಯುತ್ತಿದೆಯೋ ಅಷ್ಟೇ ಬಿಗಿ ಬಂದೋಬಸ್ತ್ ಕಾರ್ಯದಲ್ಲೂ ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸುತ್ತಿದ್ದಾರೆ.

ಈಗಾಗಲೇ ಗಣ್ಯರಿಗೆ ಆಹ್ವಾನ ನೀಡಿರುವ ಶ್ರೀರಾಮ ಜನ್ಮಭೂಮಿ ಟ್ರಸ್ಟ್, ಕಾರ್ಯಕ್ರಮಕ್ಕೆ ಆಗಮಿಸುವ ಸಾಧು ಸಂತರಿಗೆ, ಗಣ್ಯರಿಗೆ, ವಿಶೇಷ ಅತಿಥಿಗಳಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಬರುವುದಾದರೆ, ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ. ಹಾಗೂ ಆಹ್ವಾನ ಪತ್ರಿಕೆಯಲ್ಲೂ ಸೂಚನೆಗಳನ್ನು ನೀಡಲಾಗಿದೆ. ಹಾಗಾದರೆ, ಆ ನಿಯಮಗಳಲ್ಲಿ ಏನಿದೆ ಎಂಬ ಮಾಹಿತಿ ಇಲ್ಲಿದೆ.

ಸಾಧು ಸಂತರಲ್ಲಿ ವಿನಮ್ರ ನಿವೇದನೆ:
1. ನಿಮ್ಮ ಆಧಾರ್ ಕಾರ್ಡ್ ನಿಮ್ಮ ಜೊತೆ ಇರಲಿ.
2. ತಮ್ಮ ಸಂರಕ್ಷಣ ಕಾರಣಗಳಿಗಾಗಿ ಹಾಗೂ ಭದ್ರತೆಗಾಗಿ ಮೊಬೈಲ್, ಪರ್ಸ್, ಬ್ಯಾಗ್, ಛತ್ರಿ, ಸಿಂಹಾಸನ, ವೈಯಕ್ತಿಕ ಪೂಜೆ ಸಾಮಗ್ರಿ ಅಥವಾ ಗುರುಪಾದುಕೆಯನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕೊಂಡೊಯ್ಯುವುದು ಸಾಧ್ಯವಿಲ್ಲ.
3. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬೆಳಗ್ಗೆ 11.00 ಗಂಟೆ ಮೊದಲು ಪ್ರವೇಶಿಸಿ.
4. ಕಾರ್ಯಕ್ರಮ 3 ಗಂಟೆಗೂ ಅಧಿಕ ಕಾಲ ನಡೆಯಬಹುದು. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಹೋಗಲು ಮತ್ತು ವಾಪಸ್ ಬರಲು ಸುಮಾರು 1 ಕಿಲೋಮೀಟರ್ ನಡೆಯಬೇಕು.
5. ಇದು ವೈಯಕ್ತಿಕ ಆಮಂತ್ರಣ. ಒಂದು ಆಮಂತ್ರಣ ಪತ್ರಿಕೆ ಮೂಲಕ ಒಬ್ಬರಿಗೆ ಮಾತ್ರ ಪ್ರವೇಶ. ನಿಮ್ಮ ಶಿಷ್ಯಂದಿರು ನಿಮ್ಮ ಜೊತೆ ಬಂದರೂ ಅವರು ಕಾರ್ಯಕ್ರಮ ನಡೆಯುವ ಸ್ಥಳದಿಂದ ಹೊರಗೆ ಉಳಿಯಬೇಕು. ಶಿಷ್ಯಂದಿರು ಅಥವಾ ಸೇವಕರಿಗೆ ಪ್ರತ್ಯೇಕ ಆಮಂತ್ರಣ ಪತ್ರ ನೀಡಲಾಗುವುದಿಲ್ಲ.
6. ಯಾವುದೇ ಸಂತರು, ಸ್ವಾಮಿಗಳ ಜೊತೆ ಭದ್ರತಾ ಸಿಬ್ಬಂದಿ ಇದ್ದರೂ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಅವರಿಗೆ ಪ್ರವೇಶವಿಲ್ಲ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಪಾಲ್ಗೊಳ್ಳುವುದರಿಂದ ಈ ಸ್ಥಳ ಮೊದಲೇ ಸುರಕ್ಷಿತವಾಗಿರುತ್ತದೆ.
7. ಪ್ರಧಾನ ಮಂತ್ರಿ ಮಂದಿರದಿಂದ ವಾಪಸ್ ಹೋದ ಬಳಿಕವಷ್ಟೇ, ಮಂದಿರದಲ್ಲಿ ವಿರಾಜಮಾನವಾಗಿರುವ ಸಂತ ಮಹಾಪುರುಷ ರಾಮಲಲ್ಲಾನ ದರ್ಶನ ಪಡೆಯಬಹುದು.

You might also like
Leave A Reply

Your email address will not be published.