ದೀದಿ, ಕೇಜ್ರಿವಾಲ್ ಹಾದಿ ತುಳಿದ ನಿತೀಶ್ ಕುಮಾರ್ – INDI ಕೂಟದಲ್ಲಿ ಉಳಿದವರು ಯಾರು?

ಬಿಹಾರದ ರಾಜಕೀಯದಲ್ಲಿ ಎದ್ದಿದ್ದ ಬಿರುಗಾಳಿ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಬಿಜೆಪಿ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ ಇದೀಗ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಗೆ ಮರಳಿರುವುದು ಖರ್ಗೆ ನೆತತ್ವದ I.N.D.I ಮೈತ್ರಿಕೂಟಕ್ಕೆ ನಡುಕ ಹುಟ್ಟಿಸಿದೆ.

INDI group

ನಿನ್ನೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್ ಇಂದು ಬಿಹಾರದ 9ನೇ ಬಾರಿಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ರಾಜೇಂದ್ರ ಅರ್ಲೆಕಾರ್ ಅವರು ನೂತನ ಮುಖ್ಯಮಂತ್ರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

Nitish Kumar

2020ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಕೂಟದಲ್ಲಿದ್ದ ನಿತೀಶ್ ಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಎನ್‌ಡಿಎ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದರು. ಇದೀಗ ಈ ಮೈತ್ರಿ ತೊರೆದು ಮತ್ತೆ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ.

ನಿತೀಶ್ ಕುಮಾರ್ ಜೊತೆ ಉಪಮುಖ್ಯಮಂತ್ರಿಗಳಾಗಿ ಬಿಜೆಪಿಯ ವಿಜಯ್ ಸಿನ್ಹಾ ಹಾಗೂ ಸಮರ್ಥ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

 

You might also like
Leave A Reply

Your email address will not be published.