2024 New Year : ಬೆಂಗಳೂರಿಗರಿಗೆ ಶಾಕ್ ಕೊಟ್ಟ ಸರ್ಕಾರ – ಈ ಕೊರೋನಾ ರೂಲ್ಸ್ ಪಾಲಿಸಲೇಬೇಕು

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನೂತನ ವರ್ಷದ ಸಂಭ್ರಮಾಚರಣೆಗೆ ಕೆಲವೊಂದು ಸಲಹೆ, ಸೂಚನೆಗಳನ್ನು ನೀಡಿದೆ.

ಈ ಬಗ್ಗೆ ಸೂಚನೆ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, 2024ರ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿ ಪ್ರದೇಶ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಎಲ್ಲಾ ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಕೊರೋನಾ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.

ಜನಸಂದಣಿ ಇರುವ ಹಾಗೂ ಜನಸಂದಣಿಯಿರುವ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸಲು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು, ಹ್ಯಾಂಡ್ ಸ್ಯಾನಿಟೈಸರ್ ಬಳಸುವಂತೆ ಸೂಚನೆ ನೀಡಲಾಗಿದೆ. ಈ ನಿಯಮ ಬೆಂಗಳೂರು ಮಹಾನಗರಕ್ಕೆ ಮಾತ್ರ ಸೀಮಿತವಾಗಿರಲಿದೆ. ಇನ್ನುಳಿದಂತೆ ರಾಜ್ಯದ ಇತರೆ ಪ್ರದೇಶಗಳಲ್ಲಿ ಯಾವುದೇ ನಿರ್ಬಂಧವಿಲ್ಲ. ಆದಾಗ್ಯೂ, ಕೊರೋನಾ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಾದುದು ಅವಶ್ಯ.

ಈ ಹಿಂದಿನ ಆದೇಶದಂತೆ 60 ವರ್ಷ ಮೇಲ್ಪಟ್ಟವರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಪುನರುಚ್ಚರಿಸಲಾಗಿದೆ.

Covid guidelines

 

ದೈನಿಕ ಕೊರೋನಾ ಸೋಂಕಿನ ವಿವರ :

ದಿನಾಂಕ 26.12.2023 ರಂತೆ ರಾಜ್ಯದಲ್ಲಿ 464 ಸಕ್ರಿಯ ಕೊರೋನಾ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 376 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. ಹಾಗೂ ಒಟ್ಟು 74 ಖಚಿತ ಕೋವಿಡ್ ಪ್ರಕರಣಗಳಲ್ಲಿ 57 ಪ್ರಕರಣಗಳು ಮತ್ತು 9 ಮರಣ ಪ್ರಕರಣಗಳಲ್ಲಿ 4 ಮರಣ ಪ್ರಕರಣಗಳು, ಬೆಂಗಳೂರು ನಗರಕ್ಕೆ ಸೇರಿವೆ. ರಾಜ್ಯದಲ್ಲಿ ಈವರೆಗೆ ವರದಿಯಾಗಿರುವ 34 INT ಪ್ರಕರಣಗಳ ಪೈಕಿ 21 JN. 1 ಪ್ರಕರಣಗಳು ಬೆಂಗಳೂರು ನಗರದ್ದಾಗಿವೆ.

You might also like
Leave A Reply

Your email address will not be published.