ನಿವೃತ್ತಿ ನಂತರವೂ ಸರ್ಕಾರಿ ಸೇವೆ – ಸರ್ಕಾರದ ಹೊಸ ನಿಯಮ

ನಿವೃತ್ತಿ ಆದರೂ ಹೊರಗುತ್ತಿಗೆ ಆಧಾರದಲ್ಲಿ ಮತ್ತೆ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಿರಾ? ಈ ಕಡೆ ನಿವೃತ್ತಿ ಪೆನ್ಶನ್ ಮತ್ತೊಂದು ಕಡೆ ವೇತನ, ವಾಹನ ಸೌಲಭ್ಯ ಇನ್ನಿತರೆ ಸೌಲಭ್ಯಗಳು!? ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇದೀಗ ಮಹತ್ವದ ಆದೇಶವನ್ನು ಬಿಡುಗಡೆಮಾಡಿದೆ. ಈ ತೀರ್ಮಾನದಿಂದ ನಿವೃತ್ತ ಅಧಿಕಾರಿಗಳಿಗೆ ತಲೆನೋವಾದರೆ, ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ/ ನೌಕರರಿಗೆ ಸಖತ್ ಗುಡ್ ನ್ಯೂಸ್! ಆ ಆದೇಶದಲ್ಲಿ ಏನಿದೆ ಅಂತೀರ? ಇಲ್ಲಿದೆ ವರದಿ. ಡೋಂಟ್ ಮಿಸ್ ಇಟ್..

ಹೌದು! ನಿವೃತ್ತ ಸರ್ಕಾರಿ ನೌಕರರಿಗೆ ವಿವಿಧ ಇಲಾಖೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪಣಿಯ ಅನ್ವಯ ಈ ಕುರಿತು ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್ ಈ ಕುರಿತು ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳಿಗೆ ಟಿಪ್ಪಣಿಯನ್ನು ಹೊರಡಿಸಿದ್ದಾರೆ.

siddaramaiah

ಟಿಪ್ಪಣಿಯಲ್ಲಿ ಏನಿದೆ?

1. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಜ್ಯ ಸರ್ಕಾರದ ಕೆಲವು ಇಲಾಖೆಗಳಲ್ಲಿ (ಸಚಿವಾಲಯದಲ್ಲಿ) ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ/ ನೌಕರರನ್ನು ಅನಗತ್ಯವಾಗಿ ಹುದ್ದೆಗಳನ್ನು ಸೃಜಿಸಿ, ಸಮಾಲೋಚಕರು/ ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ.

2. ಸದರಿ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರೆ ಸೌಲಭ್ಯಗಳನ್ನು ನೀಡಲಾಗುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ.

3. ಕರ್ನಾಟಕ ಸರ್ಕಾರ ಸಚಿವಾಲಯ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ/ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ/ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಿ, ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ/ ನೌಕರರುಗಳನ್ನು ನಿಯೋಜನೆ ಮಾಡಲು ಕೂಡಲೇ ಅಗತ್ಯ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಕಛೇರಿಗೆ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

You might also like
Leave A Reply

Your email address will not be published.