ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು – ಡಾಕ್ಟರ್‌ ಹೇಳಿದ್ದಿಷ್ಟು!

ಅನಾರೋಗ್ಯದ ಕಾರಣ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದಿ ಶ್ರೀ ಎಸ್ ಎಂ ಕೃಷ್ಣ ಅವರನ್ನು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಸಿರಾಟದ ಸೋಂಕಿನ ಹಿನ್ನೆಲೆ ಕೆಲ ದಿನಗಳ ಹಿಂದೆ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎಪ್ರಿಲ್ 20ರಂದು ಶನಿವಾರ ವಿಟ್ಲ ಮಲ್ಯ ರಸ್ತೆಯಲ್ಲಿರುವ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ ಡಾ ವಿ.ಕೆ ಶ್ರೀನಿವಾಸ್ ಮಾತನಾಡಿ ಕೃಷ್ಣ ತೀವ್ರವಾದ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದರು ಅವರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದರು. ಎರಡು ದಿನಗಳಲ್ಲಿ ಬಿಡುಗಡೆಯಾಗಿ ಮನೆಗೆ ತೆರಳಿದ್ದರು.

ಇದೀಗ ಮತ್ತೆ ಅನಾರೋಗ್ಯದ ಹಿನ್ನೆಲೆ ಇಂದು (ಏಪ್ರಿಲ್ 29) ಎಸ್ ಎಂ ಕೃಷ್ಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಎಸ್​ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದೆ. ವಯೋಸಹಜವಾಗಿ ಆಗಾಗ ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

You might also like
Leave A Reply

Your email address will not be published.