ಬೆಂಗಳೂರಿಗರೇ ಒಂದು ತಿಂಗಳು ಈ ಮುಖ್ಯ ರಸ್ತೆ ಬಂದ್‌ – ಪರ್ಯಾಯ ಮಾರ್ಗಗಳಿವು!

ಬೆಂಗಳೂರಿನ ಪ್ರಮುಖ ರಸ್ತೆಯಾಗಿರುವ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿನ ಮೆಟ್ರೋ ಕಾಮಗಾರಿ ನಿರ್ವಹಣೆ ನಡೆಯುತ್ತಿದ್ದು, ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಪಥವಾದ ಮೈಕೋ ಸಿಗ್ನಲ್ನಿಂದ ಆನೆಪಾಳ್ಯ ಜಂಕ್ಷನ್ವರೆಗೆ 2024ರ ಏ.1ರಿಂದ 2025ರ ಮಾ.30ರವರೆಗೆ ಅಂದರೆ ಒಂದು ವರ್ಷಗಳ ಕಾಲ ಸಂಪೂರ್ಣವಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೇಲ್ ಕಾರ್ಪೋರೇಷನ್ ಲಿಮಿಟೆಡ್ (ಬಿಎಂಆರ್’ಸಿಎಲ್) ಪ್ರಕಟಣೆ ಹೊರಡಿಸಿದೆ. ಹಾಗಾದ್ರೆ ಪ್ರಕಟಣೆಯಲ್ಲಿ ಏನಿದೆ?

ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್’ನಿಂದ ಆನೆಪಾಳ್ಯ ಜಂಕ್ಷನ್’ವರೆಗೆ ಸಂಚಾರವನ್ನು ದಿನಾಂಕ 01.04.2024 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು.

Road Closed In Bengaluru

ಪರ್ಯಾಯ ಮಾರ್ಗಗಳು ಯಾವ್ಯಾವು?

ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್’ನಲ್ಲಿ ಬಲಕ್ಕೆ ತಿರುಗಿ ಭೋಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು. ಆನೆಪಾಳ್ಯ ಜಂಕ್ಷನ್’ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್’ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೇಲಿನ ಬದಲಾವಣೆಗಳನ್ನು ಗಮನಿಸಿ ಸಹಕರಿಸಬೇಕಾಗಿ ವಿನಂತಿಸುತ್ತೇವೆ ಎಂದು ಬಿಎಂಆರ್’ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

You might also like
Leave A Reply

Your email address will not be published.