ಕೆ.ಪಿ.ಎಸ್.ಸಿ ಗೌಪ್ಯ ಶಾಖೆಯಲ್ಲಿ ಕಡತ ನಾಪತ್ತೆ : ಪ್ರಕರಣ ದಾಖಲು

ಕರ್ನಾಟಕ ಲೋಕಸೇವಾ ಆಯೋಗ (ಕೆ.ಪಿ.ಎಸ್.ಸಿ) ನೇಮಕಾತಿ ಕಡತ ನಾಪತ್ತೆಯಾಗಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

2016 ರಲ್ಲಿ ಕೊಳೆಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ನಡೆದಿತ್ತು. 2018 ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟವಾಗಿತ್ತು. ಇದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿ ತಯಾರಿ ಮಾಡಲಾಗಿತ್ತು.

ಕೆ.ಪಿ.ಎಸ್.ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿ ಮಾಡಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರವಾಗಿತ್ತು. ಆ ಬಳಿಕ ಕಡತ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಕೆ.ಪಿ.ಎಸ್.ಸಿ ಯ ಎಲ್ಲಾ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಗಿದೆ. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2 ಕ್ಕೆ ಹಿಂದಿರುಗಿಸುವಂತೆ ಕೆ.ಪಿ.ಎಸ್.ಸಿ ಜ್ಞಾಪನ ಹೊರಡಿಸಿತ್ತು. ಸುಮಾರು ಒಂದು ತಿಂಗಳು ಶೋಧ ನಡೆಸಿದರೂ ಕಡತ ಪತ್ತೆಯಾಗಿಲ್ಲ.

ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗದ ಸಭೆಯಲ್ಲಿ ನಿರ್ಧರಿಸಲಾಯಿತು. ಹೀಗಾಗಿ ಕಡತ ನಾಪತ್ತೆ ಬಗ್ಗೆ ಪೊಲೀಸ್ ಠಾಣೆಗೆ ಸಹಾಯಕ ಕಾರ್ಯದರ್ಶಿ ದೂರು ನೀಡಿದ್ದಾರೆ. ಸದ್ಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You might also like
Leave A Reply

Your email address will not be published.