ತಾಪಮಾನ ಹೆಚ್ಚಳದಿಂದ ಇಬ್ಬರು ಸಾವು

ಕೇರಳದಲ್ಲಿ ಬಿಸಿಲಿನ ತಾಪದಿಂದ 90 ವರ್ಷದ ವೃದ್ಧೆ ಮತ್ತು 53 ವರ್ಷದ ಪುರುಷರೊಬ್ಬರು ಭಾನುವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ತಾಪಮಾನವು 41.9 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ 5.5 ಡಿಗ್ರಿ ಸೆಲ್ಸಿಯಸ್ ನಷ್ಟು ಅಧಿಕವಾಗಿದೆ ಎಂದು ತಿಳಿದುಬಂದಿದೆ.

ಬಿಸಿಲಿನ ತಾಪದಿಂದ ಈ ಸಾವು ಸಂಭವಿಸಿದೆಯೇ? ಎಂಬುದನ್ನು ಇನ್ನೂ ದೃಢೀಕರಿಸಿಲ್ಲ. ಮೃತದೇಹಗಳ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿ ಶೇಖ‌ರ್ ಕುರಿಯಾಕೋಸೆ ತಿಳಿಸಿದ್ದಾರೆ.

Was this death due to heatstroke - State Disaster Management Officer Shekhar Kuriyakose

ಕೇರಳದಾದ್ಯಂತ ಬಿಸಿಲಿನ ತಾಪಮಾನವು ಸಾಮಾನ್ಯಕ್ಕಿಂತ ಏರಿಕೆಗೊಂಡಿದೆ. ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ವರ್ಷದ ಏಪ್ರಿಲ್‌ನಿಂದ ಜೂನ್ ನಡುವೆ ಸಾಮಾನ್ಯಕ್ಕಿಂತ ಅಧಿಕ ಬಿಸಿಗಾಳಿಯ ದಿನಗಳು ಇರಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಕೂಡ ಮುನ್ಸೂಚನೆ ನೀಡಿದೆ.

You might also like
Leave A Reply

Your email address will not be published.